ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅನನ್ಯ-ಫಣೀಂದ್ರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅತೀ ಮುಖ್ಯವಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
ನಗರದ ಜಿಲ್ಲಾ ವಕೀಲರ ಸಂಘದ ಸಭಾಂಗಣಲ್ಲಿ ಕರ್ನಾಟಕ ಲೋಕಾಯುಕ್ತ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ವಕೀಲರೊಂದಿಗೆ ಸಂವಾದಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ವಕೀಲರಿಗೆ ವಿಶೇಷವಾದ ಗೌರವ ಇದೆ. ಜನರು ತಮಗೆ ಕಷ್ಟ ಬಂದಾಗ, ಅನ್ಯಾಯವಾದಾಗ ಮೊದಲಿಗೆ ಅವರು ನ್ಯಾಯಾಂಗದ ಮೇಲೆ ನಂಬಿಕೆ ಇರಿಸಿ, ವಕೀಲರತ್ತ ಧಾವಿಸುತ್ತಾರೆ. ಹಾಗಾಗಿ ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅನನ್ಯವಾದುದು ಎಂದು ಹೇಳಿದರು.

- Advertisement - 

ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯವೂ ಇದಾಗಿದೆ. ನಿಟ್ಟಿನಲ್ಲಿ ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನೀಡುವ ಮೂಲಕ ನ್ಯಾಯ ದೊರಕಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಶರೀರಕ್ಕೆ ಕಾಯಿಲೆ ಬಂದಾಗ ವೈದ್ಯರ ಬಳಿ ತೆರಳುತ್ತಾರೆ. ಸಾಮಾಜಿಕವಾಗಿ ಕಾಯಿಲೆ ಬಂದಾಗ ವಕೀಲರ ಬಳಿ ಬರುತ್ತಾರೆ. ಹಾಗಾಗಿ ಪ್ರಬುದ್ಧ ಸಮಾಜ , ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ದೊಡ್ಡದಿದೆ ಎಂದು ಹೇಳಿದರು.

- Advertisement - 

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೋಣ ವಾಸುದೇವ್, ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕರಾದ ಜೆ.ವಿ.ವಿಜಯಾನಂದ, ಪೃಥ್ವಿರಾಜ್ ವರ್ಣೇಕರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಕಿರಣ್ ಪಿ.ಎಂ.ಪಾಟೀಲ್, ಕರ್ನಾಟಕ  ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ, ವಿಶೇಷ ಸಾರ್ವಜನಿಕ ಅಭಿಯೋಜಕ ಬಿ.ಮಲ್ಲೇಶಪ್ಪ, ಜಿಲ್ಲಾ ವಕೀಲರ  ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು, ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ಇದ್ದರು.

 

 

Share This Article
error: Content is protected !!
";