ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ನಗರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ೮ ಅಂಗನವಾಡಿ ಕಾರ್ಯಕರ್ತೆ ಮತ್ತು ೨೫ ಸಹಾಯಕಿಯರ ಹುದ್ದೆ ಹಾಗೂ ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ೫ ಅಂಗನವಾಡಿ ಕಾರ್ಯಕರ್ತೆ
, ೩ ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು ೨೯ ಸಹಾಯಕಿಯರ

ಹುದ್ದೆಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ ೨೬ರೊಳಗಾಗಿ ಲಿಖಿತವಾಗಿ ಸಲ್ಲಿಸಬಹುದಾಗಿದೆ ಎಂದು ನಗರ ಹಾಗೂ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

        ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ವಾರ್ಡ್, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ ಇತ್ಯಾದಿ ಸ್ಥಳಗಳಲ್ಲಿ  ಹಾಗೂ ಜಿಲ್ಲಾಡಳಿತದ ಜಾಲತಾಣ https://tumkur.nic.inರಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

        ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಖುದ್ದು ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";