ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಕೃತಜ್ಞತಾ ಸಮಾರಂಭ, ವಾರ್ಷಿಕ ದತ್ತಿ ಪ್ರದಾನ ಸಮಾರಂಭ, ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ, ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಾಗೂ ಸರ್ವ ಸದಸ್ಯರ ಮಹಾಸಭೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ, ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಮುಖಂಡರಾದ ಗಂಗಹನುಮಂತಪ್ಪ, ಎಸ್.ನಾಗಣ್ಣ, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.