ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ತೋಟದ ಉತ್ಪನ್ನಗಳ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣ ಸಂಘ (ಜಿಲ್ಲಾ ಹಾಪ್‌ಕಾಮ್ಸ್)ದ 2023-24ನೇ ಸಾಲಿನ ಸಂಘದ 39ನೇ ವಾರ್ಷಿಕ ಮಹಾಸಭೆ ಇದೇ ಸೆ.12ರಂದು ಬೆಳಿಗ್ಗೆ 11ಕ್ಕೆ ಚಿತ್ರದುಗ ನಗರದ ತುರುವನೂರು ರಸ್ತೆಯ ಸಂಘದ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.