ಹಾಲು ಉತ್ಪಾದಕ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಹಕಾರ ಸಂಘ  ಅಭಿವೃದ್ಧಿಯಾಗ ಬೇಕಾದರೆ  ಸಂಘಕ್ಕೆ ಹೆಚ್ಚಿನ ಹಾಲು ಪೂರೈಕೆ ಹಾಗು ಗುಣಮಟ್ಟ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿ ಶ್ರೀಮತಿ ಎಂ. ಅನಿತಾ ಹೇಳಿದರು.

 ದೊಡ್ಡಬಳ್ಳಾಪುರ ತಾಲ್ಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023 – 2024 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು,

 ಶುದ್ಧ ಹಾಗು ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಸಂಘವು  ಉಳಿಯುತ್ತದೆ ಮತ್ತು ಸರ್ಕಾರದ ಪ್ರೋತ್ಸಾಹ ಧನ  ರೈತರಿಗೆ ಬರಲು ಅನುಕೂಲವಾಗುತ್ತದೆರೈತರು ಕೃಷಿ ಚಟುವಟಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ  ಯಾವುದೇ ನಷ್ಟ ಇಲ್ಲ, ರಾಸುಗಳಿಗೆ ಯಾವಾಗಲೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು, ಹಾಲು ಹಿಂಡಲು ಮತ್ತು ಹಾಲನ್ನು ಸಂಘಕ್ಕೆ ತರಲು ಸ್ಟೇನ್‌ಲೆಸ್ ಸ್ಟೀಲ್ ಪಾತ್ರೆಗಳನ್ನು ಬಳಸಿದರೆ ಬಹಳ ಒಳ್ಳೆಯದು, ಹಾಲು ಕರೆಯುವ ಮೊದಲು ಕೈಗಳನ್ನು ಸಾಬೂನಿನಿಂದ ತೊಳೆದುಕೊಂಡು ಕೆಚ್ಚಲನ್ನು ಶುದ್ಧ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಸ್ವಚ್ಚತೆ ಮಾಡಬೇಕು  ಎಂದರು 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿ ಇಂದು ನಂದಿನಿ  ಹಾಲು ಮತ್ತು ಹಾಲಿನ ಉತ್ಪನ್ನಗಳು ಹೊರ ರಾಜ್ಯಗಳಿಗೆ ಅಲ್ಲದೆ ಪಾಶ್ಚಾತ್ಯ ದೇಶಗಳಲ್ಲಿ ಮಾರುಕಟ್ಟೆಯನ್ನು ವಿಸ್ತರಿಸಿರುವುದು ನಂದಿನಿ ಹಾಲಿನ ಉತ್ಕೃಷ್ಟತೆಗೆ ಸಾಕ್ಷಿ ಯಾಗಿದೆ, ಆರೋಗ್ಯವಂತ ಹಸುವಿನ ಶುದ್ಧ ಗುಣಮಟ್ಟದ ಹಾಲನ್ನು ಮಾತ್ರ ಸಂಘವು ತೆಗೆದುಕೊಳ್ಳುತ್ತದೆ, ಕೆಚ್ಚಲು ಬಾವು ಇರುವ ಹಾಲನ್ನು  ಸಂಘಕ್ಕೆ ಸರಬರಾಜು ಮಾಡಬಾರದು.

ಉತ್ತಮ ಗುಣಮಟ್ಟದ ಹಾಲಿಗೆ ಮಾತ್ರ 5 ರೂ. ಪ್ರೋತ್ಸಾಹ ಧನ ಬರುತ್ತದೆ, ಬಮೂಲ್ ನಿಂದ ರೈತರಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು,ಬೆಂಗಳೂರು ಹಾಲು ಒಕ್ಕೂಟದಿಂದ  ಸಂಘದ ಕಟ್ಟಡ ಕಟ್ಟಲು ಕೆ.ಎಂ.ಎಫ್ ನಿಂದ ಅನುದಾನ   ರೈತರ ಮಕ್ಕಳಿಗೆ  ಪ್ರತಿಭಾ ಪುರಸ್ಕಾರ,ನೂತನ ಕಟ್ಟಡಗಳಿಗೆ  ಪೀಠೋಪಕರಣಗಳು, ಪಶು ಆಹಾರ,   ಸಂಘದ ಒಳಿತಿಗಾಗಿ ಸಾಲ ಸೌಲಭ್ಯ ಹಾಗು  ಮತ್ತಿತರ ಸೇವೆಒದಗಿಸಲಾಗಿದ್ದು  ರೈತರು ಮತ್ತು ಸಂಘಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

 ಸಂಘದ ಮುಖ್ಯಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. 

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಹನುಮಂತ ಗೌಡ, ನಿರ್ದೇಶಕರಾದ ಎಂ.ರಾಮಪ್ಪಎಂ.ಮಾರಪ್ಪ, ಕೃಷ್ಣಪ್ಪ, ಮುನಿಕೃಷ್ಣ, ಅಕ್ಕಯಮ್ಮ, ನಾರಾಯಣಪ್ಪ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಭಾಗ್ಯಮ್ಮ, ಮತ್ತಿತರರು ಹಾಜರಿದ್ದರು.

 

- Advertisement -  - Advertisement - 
Share This Article
error: Content is protected !!
";