ಶಾಸಕ ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ, ಘರ್ಷಣೆ ವೇಳೆ ನಡೆದ ಫೈರಿಂಗ್ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಶಾಸಕ ಜನಾರ್ಧನ ರೆಡ್ಡಿ ತನ್ನನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೇ ತನ್ನ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಸಾಕ್ಷಿಯಾಗಿ ಒಂದು ಬುಲೆಟ್ ಕೂಡ ಪತ್ತೆಯಾಗಿದೆ ಎಂದು ತೋರಿಸಿದ್ದರು. ಇದೀಗ ಜನಾರ್ಧನ ರೆಡ್ಡಿ ಮನೆಯಲ್ಲಿ ಮತ್ತೊಂದು ಬುಲೆಟ್ ಪತ್ತೆಯಾಗಿದೆ.

- Advertisement - 

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ನಿನ್ನೆ ನಡೆದ ಗಲಾಟೆ, ಫೈರಿಂಗ್ ವೇಳೆ ನನ್ನ ಮೇಲೆ ಗುಂಡಿನ ದಾಳಿ ನಡೆದಿದೆ. ನಿನ್ನೆ ಮನೆಯಂಗದಲ್ಲಿ ಒಂದು ಬುಲೆಟ್ ಪತ್ತೆಯಾಗಿತ್ತು. ಮನೆಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ. ಇಂದು ಮನೆಯ ಒಳಗೆ ಪರಿಶೀಲನೆ ನಡೆಸಿದಾಗ ಮನೆಯೊಳಗೆ ಮತ್ತೊಂದು ಗುಂಡು ಪತ್ತೆಯಾಗಿದೆ.

ಈವರೆಗೆ ಎರಡು ಬುಲೆಟ್ ಗಳು ಪತ್ತೆಯಾಗಿವೆ. ಇವು ನನ್ನನ್ನು ಟಾರ್ಗೆಟ್ ಮಾಡಿ ನಡೆಸಿದ ದಾಳಿ ಎಂದು ತಿಳಿಸಿದ್ದಾರೆ. ಅಲ್ಲದೇ ಎರಡು ಬುಲೆಟ್ ಗಳನ್ನು ಮಾಧ್ಯಗಳಿಗೆ ಪ್ರದರ್ಶಿಸಿದ್ದಾರೆ. ನಿನ್ನೆ ದುಷ್ಕರ್ಮಿಗಳು ನಮ್ಮ ಮನೆ ಮೇಲೆ 8 ಸುತ್ತು ಗುಂಡು ಹಾರಿಸಿದ್ದಾರೆ. 8 ಸುತ್ತು ಫೈರಿಂಗ್ ಮಾಡಿರುವ ವಿಡಿಯೋ ಕೂಡ ಲಭ್ಯವಾಗಿದ್ದು, ಅದರಲ್ಲಿ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

- Advertisement - 

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಬಳಿ ಶಾಸಕ ಭರತ್ ರೆಡ್ಡಿ, ಸತೀಶ್ ರೆಡ್ಡಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟುವ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ, ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವೇಳೆ ಫೈರಿಂಗ್ ನಡೆದಿದ್ದು, ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬಾತ ಬಲಿಯಾಗಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಶಾಸಕರ ಖಾಸಗಿ ಗನ್ ಮ್ಯಾನ್ ಓರ್ವ ಜನಾರ್ಧನ ರೆಡ್ಡಿ ಮನೆಯತ್ತ ಫೈರಿಂಗ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದು ತನ್ನನ್ನು ಗುರಿಯಾಗಿಸಿ ಕಾಂಗ್ರೆಸ್ ಗೂಂಡಾಗಳು ನಡೆಸಿರುವ ದಾಳಿ ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವರು ಶ್ರೀರಾಮುಲು ಸೋಮಶೇಖರ ರೆಡ್ಡಿ, ಅನಿಲ್ ನಾಯಿಡು, ಪಾಲಣ್ಣ, ದರಪ್ಪ ನಾಯಕ, ದಮ್ಮೂರ್ ಶೇಖರ್,ಇನ್ನು ಮುಂತಾದವರು ಇದ್ದರು.

 

 

Share This Article
error: Content is protected !!
";