ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ಪಂಪ್‌ಸೆಟ್‌ಗಳಿಗೆ ಟ್ರಾನ್ಸ್‌ಫಾರ್ಮರ್‌ಸಮೇತ ಉಚಿತವಾಗಿ ಮೂಲಸೌಕರ್ಯ ಕಲ್ಪಿಸುವ ಯೋಜನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಗಿತಗೊಳಿಸಿದ್ದು,
ರೈತರೇ ಸ್ವಂತ ಖರ್ಚಿನಲ್ಲಿ ಕೃಷಿ ಕೊಳವೆ ಬಾವಿಗಳಿಗೆ ವಿದ್ಯುತ್‌ಸಂಪರ್ಕ ಪಡೆಯಬೇಕಾದ ದುಸ್ಥಿತಿ ತಂದಿಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ಕೊಳವೆ ಬಾವಿಗಳ ವಿದ್ಯುತ್‌ಸಂಪರ್ಕದ ಖರ್ಚು ವೆಚ್ಚದ ಭಾರಕ್ಕೆ ರೈತರು ಬಸವಳಿದಿದ್ದು, ಲಕ್ಷಾಂತರ ರೂ. ಖರ್ಚು ಮಾಡಿ ವಿದ್ಯುತ್‌ಸಂಪರ್ಕ ಪಡೆಯಲು ಸಾಧ್ಯವಾಗದ ಕಾರಣ ಸಣ್ಣಪುಟ್ಟ ರೈತರು ಕೃಷಿಯಿಂದಲೇ ವಿಮುಖರಾಗುತ್ತಿದ್ದಾರೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.