ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಸದ ಸೆಸ್ ನೆಪದಲ್ಲಿ ಮತ್ತೊಂದು ಲೂಟಿ!. ಹಾಲು, ಕರೆಂಟು, ಪೆಟ್ರೋಲ್, ಡಿಸೇಲ್, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೀಗೆ ಎಲ್ಲದರ ಬೆಲೆ ಹೆಚ್ಚಿಸಿ ಜನಸಾಮಾನ್ಯರನ್ನ ಲೂಟಿ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ,
ಈಗ ಕಸದ ಮೇಲೂ ದುಬಾರಿ ಸೆಸ್ ಹಾಕುವ ಮೂಲಕ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಹಾಕುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಒಟ್ಟಿನಲ್ಲಿ ಈ ಲೂಟಿಕೋರ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ ಎಂದು ಅಶೋಕ್ ಹೇಳಿದ್ದಾರೆ.