ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ – ಮುಖ್ಯಮಂತ್ರಿ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ಜಿಲ್ಲಾ ಆಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಧಾನಸೌಧ ಭವ್ಯ ಮೆಟ್ಟಿಲುಗಳ ಬಳಿ ಹಮ್ಮಿಕೊಳ್ಳಲಾದ “ಕಿತ್ತೂರು ವಿಜಯೋತ್ಸವದ ಜ್ಯೋತಿ”ಗೆ ಚಾಲನೆ ನೀಡಿ

ಮಾತನಾಡಿದ ಮುಖ್ಯಮಂತ್ರಿಗಳು ಕಿತ್ತೂರು ಚೆನ್ನಮ್ಮ ಉತ್ಸವ 2024 ಅಕ್ಟೋಬರ್ 23, 24, 25ರಂದು ಕಿತ್ತೂರಿನಲ್ಲಿ ನಡೆಯಲಿದೆ. ಕಿತ್ತೂರು ವಿಜಯವಾಗಿ 200 ವರ್ಷವಾಗುತ್ತದೆ. ಅದರ ಅಂಗವಾಗಿ ಇಂದು ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಿತ್ತೂರು ವಿಜೋಯೋತ್ಸವದ ಜ್ಯೋತಿಯು ಇಲ್ಲಿಂದ ಹೊರಟು ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರನ್ನು ತಲುಪಲಿದೆ ಎಂದು ತಿಳಿಸಿದರು.

ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರಾಗಿರುವ ರಾಣಿ ಚನ್ನಮ್ಮ. ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದು ತಿಳಿಸಿದರು.

ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವು ಮತ್ತು ಅಗತ್ಯ ಅನುದಾನವನ್ನೂ ನೀಡುತ್ತಿದೆ. ಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನ್ಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ ಎಂದರು.

ಗಾಂಧೀಜಿಯವರು ದೇಶದ  ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ವಹಿಸಿ ಶಾಂತಿಯುತವಾಗಿ ಸ್ವಾತಂತ್ರ್ಯ ದೊರಕಿಸಿಕೊಟ್ಟರು. 1920 ರಿಂದ 1947 ರ ವರೆಗಿನ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ,  ಬೆಳಗಾವಿ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್,

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರಣ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕಿತ್ತೂರು ಶಾಸಕ ಬಾಬಾ ಸಾಹೇಬ ಪಾಟೀಲ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";