ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿದ್ದರಾಮಯ್ಯನ ಅಹಂಕಾರಕ್ಕೆ ಮತ್ತೊಬ್ಬ ಅಧಿಕಾರಿ ಬಲಿಪಶು ! ಆಗಿದ್ದಾರೆಂದು ಜೆಡಿಎಸ್ ಹರಿಹಾಯ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ದರ್ಪದಿಂದ ಮನನೊಂದಿರುವ ಎಎಸ್‌ಪಿ ನಾರಾಯಣ ಭರಮನಿ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕ್ರಮದ ವೇದಿಕೆ ಮೇಲೆಯೇ ಸಿದ್ದರಾಮಯ್ಯ, ಎಎಸ್‌ಪಿ ಭರಮನಿ ಅವರಿಗೆ ಹೊಡೆಯಲು ಕೈ ಎತ್ತಿದ್ದರು.
ಈ ಘಟನೆಯಿಂದ ತಮಗಾದ ಅಪಮಾನ, ಅವಮಾನಕ್ಕೆ ತೀವ್ರವಾಗಿ ನೊಂದು ಭರಮನಿ ಸ್ವಯಂ ನಿವೃತ್ತಿ ಕೋರಿದ್ದಾರೆ ಎಂದು ಜೆಡಿಎಸ್ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದೆ.