ಚಾಲಕ-ಕಂ-ನಿರ್ವಾಹಕ ಹುದ್ದೆಗೆ ವೃತ್ತಿ ಪರೀಕ್ಷೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು 2024ನೇ ಡಿಸೆಂಬರ್ 16 ರಿಂದ ನಡೆಸಲಾಗುತ್ತಿದ್ದು, ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್.ಎಂ.ಎಸ್ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿಯನ್ನು ನೀಡಲಾಗಿತ್ತು.

- Advertisement - 

ಆದರೆ, ಕೆಲವೊಂದು ಅಭ್ಯರ್ಥಿಗಳು ಗೈರುಹಾಜರಾಗಿರುವುದರಿಂದ ಅವರಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿ 2025ನೇ ಮೇ 08 ರಿಂದ 20ರ ವರೆಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ಮರು ನಿಗದಿಗೊಳಿಸಲಾಗಿದೆ.

- Advertisement - 

ಗೈರುಹಾಜರಾದ ಅಭ್ಯರ್ಥಿಗಳು ಮತ್ತೊಮ್ಮೆ ನಿಗಮದ ಅಧಿಕೃತ ವೆಬ್‍ಸೈಟ್ www.ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗುವುದು.  

ಈ ಅವಕಾಶವು ಅಂತಿಮ ಅವಕಾಶವಾಗಿದ್ದು, ತದನಂತರದಲ್ಲಿ ಹಾಸನ ಚಾಲನಾ ಪಥದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆಯ್ಕೆ ಸಮಿತಿಯ ನಿರ್ದೇಶಕರು (ಸಿ&ಜಾ) ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

- Advertisement - 

Share This Article
error: Content is protected !!
";