ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಲು ಉತ್ಪಾದಕ ರೈತರಿಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಘೋಷಿಸಿದೆ.
ಈಗಾಗಲೇ ಸರ್ಕಾರದಿಂದ 5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಬಮೂಲ್ನಿಂದ ಯಾವುದೇ ತಾರತಮ್ಯ ಇಲ್ಲದೆ ಎಲ್ಲರಿಗೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಏಪ್ರಿಲ್ 1ರಿಂದ ಮಾರ್ಚ್ 31ವರೆಗೆ ಹಾಲು ಹಾಕಿರುವ ರೈತರಿಗೆ ಇದು ಲಭ್ಯವಾಗಲಿದೆ.
ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್:
ಹಾಲು ಉತ್ಪಾದಕ ರೈತರಿಗೆ ಬಮೂಲ್ ವತಿಯಿಂದ 1 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವೂ 5 ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದೆ. ರೈತರಿಂದ 59,39,78,492 ಲೀಟರ್ ಹಾಲು ಖರೀದಿಸಿದ್ದೇವೆ. ಈ ಬಾರಿ 500 ಕೋಟಿ ಹೆಚ್ಚುವರಿ ಟರ್ನ್ ಓವರ್ ಮಾಡುವ ಗುರಿ ಇದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ತಿಳಿಸಿದ್ದಾರೆ.
ಕಾರ್ಮಿಕರಿಗೆ 6 ಕೋಟಿ ಡಿಎ ಕೊಡಬೇಕು. 60 ಕೋಟಿ ರೂ ಲಾಭ ಗಳಿಸುವ ಮಟ್ಟಿಗೆ ಬಂದಿದ್ದೇವೆ. ಹೀಗಾಗಿ ಸಿಬ್ಬಂದಿಗೆ ಬಾಕಿ ಇದ್ದ ಹಣ ಕೊಡಲು ತೀರ್ಮಾನಿಸಲಾಯಿತು. ಗುತ್ತಿಗೆದಾರರಿಗೆ 5 ಸಾವಿರ ಬೋನಸ್ ಕೊಡುತ್ತೇವೆ. ಗುಣಮಟ್ಟದ ಹಾಲು ಕೊಡುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸೋರಿಕೆ ತಡೆ-
ಮಾರುಕಟ್ಟೆಯಲ್ಲಿ ಸೋರಿಕೆ ಆಗುತ್ತಿದ್ದ ಹಾಲನ್ನು ತಡೆದಿದ್ದೇವೆ. ತುಪ್ಪದ ಬೆಲೆ ಜಾಸ್ತಿ ಮಾಡಿದ್ದೇವೆ. ಚೀಸ್ ಜಾಸ್ತಿ ಮಾರಾಟವಾಗುತ್ತಿದೆ. ಡೆಲ್ಲಿ ಮದರ್ ಡೈರಿಗೆ 2 ಲಕ್ಷ ಕೊಡುತ್ತಿದ್ದೇವೆ. ದುಂದು ವೆಚ್ಚ ಕಡಿಮೆ ಮಾಡಿದ್ದೇವೆ. ಸಿಬ್ಬಂದಿ ಮತ್ತು ಮಾರುಕಟ್ಟೆ ಸುಧಾರಣೆ ಮಾಡಲಾಗಿದ್ದು, ಈ ಎಲ್ಲಾ ಕೆಲವು ಕಾರಣಗಳಿಂದ ಲಾಭ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಕ್ಕೆ ಮನವಿ:
ಕ್ಷೀರ ಭಾಗ್ಯಕ್ಕೆ 75 ಸಾವಿರ ಲೀಟರ್ ಪೌಡರ್ ಆಗಿ ಕನ್ವರ್ಟ್ ಮಾಡಿ ಕೊಡುತ್ತಿದ್ದೇವೆ. ರಾಗಿ ಮಾಲ್ಟ್ ಜೊತೆ ಹಾಲು ಮಿಕ್ಸ್ ಮಾಡಿ ಕೂಡ ನಾವೂ ಕೊಡಲು ಸಿದ್ಧ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾಹಿತಿ ನೀಡಿದ್ದಾರೆ.

