ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಸಿರು ಕ್ರಾಂತಿಯತ್ತ ಮತ್ತೊಂದು ಹೆಜ್ಜೆ! ಇಡಲಾಗುತ್ತಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.
ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣಕ್ಕೆ ಭೂಮಿಪೂಜೆ-‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಶತಾಯುಷಿ, ಸಾಲುಮರದ ತಿಮ್ಮಕ್ಕನವರು ಪರಿಸರ ಸಂರಕ್ಷಣೆಗಾಗಿ ಮಾಡಿರುವ ಅಪಾರ ಕೊಡುಗೆಯನ್ನು ಸ್ಮರಿಸುತ್ತಾ, ಅವರ ಹೆಸರಿನಲ್ಲಿ #ವಿಜಯಪುರ ಜಿಲ್ಲೆಯ #ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಬಳಿ ವೃಕ್ಷೋದ್ಯಾನ ನಿರ್ಮಾಣವಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಈ ವೃಕ್ಷೋದ್ಯಾನವು ಹಸಿರು ಪರಿಸರ ನಿರ್ಮಾಣಕ್ಕೆ ದಾರಿಯಾಗಲಿದ್ದು, ಮುಂದಿನ ಪೀಳಿಗೆಗಳಿಗೂ ಶಾಶ್ವತವಾದ ಪ್ರಕೃತಿ ಸಂಪತ್ತನ್ನು ನೀಡಲಿದೆ ಎಂದು ಎಂ.ಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟದ ಸಹೋದ್ಯೋಗಿಗಳಾದ ಈಶ್ವರ ಖಂಡ್ರೆ, ಹೆಚ್.ಕೆ. ಪಾಟೀಲ್ ಅವರೊಂದಿಗೆ ಈ ದಿನ ವೃಕ್ಷೋದ್ಯಾನಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಸಂಸದ ರಮೇಶ ಜಿಗಜಿಣಗಿ, ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

