ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ಶಕ್ತಿ ಯೋಜನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ‌ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು 500 ಕೋಟಿ‌ ಮಹಿಳಾ ಟಿಕೇಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ *International Book of Records – World Record of Excellence ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಈಗಾಗಲೇ Golden Book of World Records ನಲ್ಲಿ ಸೇರ್ಪಡೆಯಾಗಿತ್ತು. ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ‌ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಹಾಗೂ ಅವರು ಧನ್ಯವಾದಗಳನ್ನು ಸಲ್ಲಿಸಿದರು.

- Advertisement - 

ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ‌ಸಾಮಾಜಿಕ‌ ಹಾಗೂ ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ‌. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದೆ. ಮಹಿಳಾ ಪ್ರಯಾಣಿಕರಿಗೂ ಅಭಿನಂದನೆಗಳನ್ನು ಅವರು ಸಲ್ಲಿಸಿದರು.

- Advertisement - 
Share This Article
error: Content is protected !!
";