ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಾರೇ ಏನೇ ಆಕ್ಷೇಪಣೆ ಮಾಡಿದರೂ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ನಡೆಯಲಿದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ.
ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದಿನ ಗಣತಿ ಸರಿಯಿಲ್ಲ. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಎಲ್ಲರೂ ಸಮೀಕ್ಷೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಡಿಸಿಎಂ ಅವರು ಮನವಿ ಮಾಡಿದ್ದಾರೆ.

