ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗದಗದಲ್ಲಿಂದು ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆಯೋಜಿಸಲಾಗಿತ್ತು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು.
ಪ್ರತಿ ನಿತ್ಯವೂ ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಆಕ್ರೋಶ ಹೊರಹಾಕುವ ಮೂಲಕ ಬಿಜೆಪಿಯ ಬೃಹತ್ ಜನಪರ ಆಂದೋಲನವನ್ನು ಬೆಂಬಲಿಸಿದ ಪರಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಂಕಲ್ಪ ತೊಟ್ಟಿರುವುದನ್ನು ಸಾಕ್ಷೀಕರಿಸಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಸಿ.ಸಿ.ಪಾಟೀಲ್, ಶಾಸಕರು ಹಾಗೂ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ, ಜಿಲ್ಲಾಧ್ಯಕ್ಷರಾದ ರಾಜು ಕುರಡಗಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.