ಖರ್ಗೆ, ಮುನಿಯಪ್ಪ, ಪರಮೇಶ್ವರ್ ಗೆ ಸಿಎಂ ಮಾಡದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
5 ವರ್ಷ ಸಿಎಲ್ ಪಿ ನಾಯಕರಾಗಿ ಸೇವೆ ಸಲ್ಲಿಸಿದರೂ ಮಲ್ಲಿಕಾರ್ಜನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

8 ವರ್ಷ ಸತತವಾಗಿ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಡಾ.ಜಿ.ಪರಮೇಶ್ವರ ಅವರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಲಿಲ್ಲ.

- Advertisement - 

7 ಬಾರಿ ಸತತವಾಗಿ ಸಂಸದರಾದರೂ ಕೆ.ಹೆಚ್.ಮುನಿಯಪ್ಪ ಅವರನ್ನು ಕಾಂಗ್ರೆಸ್ ಪಕ್ಷ ಕನಿಷ್ಠ ಪಕ್ಷ ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯೂ ಮಾಡಲಿಲ್ಲ.

ಅಂತೂ ಇಂತೂ ದಲಿತ ವಿರೋಧಿ ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎನ್ನುವಂತಾಗಿದೆ ಎಂದು ಅಶೋಕ್ ಟೀಕಾಪ್ರಹಾರ ಮಾಡಿದರು.

- Advertisement - 

Share This Article
error: Content is protected !!
";