ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇದು ದಲಿತ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಢೋಂಗಿ ಸಮೀಕ್ಷೆ. ಪರಿಶಿಷ್ಟರ ಉದ್ಧಾರ ಮಾಡುತ್ತೇವೆ ಎಂದು ಬೊಗಳೆ ಬಿಡುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ ಅವರೇ,
ಮನೆ ಮಾಲಿಕರ/ವಾಸವಿರುವವರ ಬಳಿ ಮಾಹಿತಿಯನ್ನು ಪಡೆಯದೇ ಕದ್ದು ಮುಚ್ಚಿ ಮನೆಗಳಿಗೆ ಚೀಟಿ ಅಂಟಿಸುವುದು ಯಾವ ಮಾದರಿಯ ಸಮೀಕ್ಷೆ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ಲಂಚಗುಳಿತನ, ಭ್ರಷ್ಟಾಚಾರ, ಅಧಿಕಾರ ದಾಹ, ಕುರ್ಚಿ ಕಿತ್ತಾಟದಲ್ಲಿ ಮಗ್ನರಾಗಿರುವ ಸಿಎಂ, ಡಿಸಿಎಂ ನಿಮ್ಮ ರಾಜಕೀಯ ಮೇಲಾಟಗಳಿಗಾಗಿ ಕನ್ನಡಿಗರ ತೆರಿಗೆ ಹಣವನ್ನು ಪೋಲು ಮಾಡಬೇಡಿ ಎಂದು ಜೆಡಿಎಸ್ ತಾಕೀತು ಮಾಡಿದೆ.

