ಚಂದ್ರವಳ್ಳಿ ನ್ಯೂಸ್, ತುಮಕೂರು:
“ಅನ್ನದಾತರ ರಸಗೊಬ್ಬರ ಸಮಸ್ಯೆಗೆ ಕಾರಣವಾದ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರ ಹಾಗೂ ಯೂರಿಯಾವನ್ನು ಕಾಳ ಸಂತೆಯಲ್ಲಿ ಮಾರಿ ರೈತರಿಗೆ ವಂಚಿಸಿದ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತುಮಕೂರು ನಗರದ ಟೌನ್ ಹಾಲ್ ಆವರಣದಲ್ಲಿರುವ ಸಂವಿಧಾನದ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಜಿಲ್ಲಾಧಿಕಾರಿಗಳ ಕಚೇರಿಯವರಗೆ ಸಹಸ್ರಾರು ಸಂಖ್ಯೆಯ ರೈತ ಬಂಧುಗಳು ಹಾಗೂ ಕಾರ್ಯಕರ್ತರೊಡಗೂಡಿ ತೆರಳಿ ಜಿಲ್ಲೆಯ ರೈತರಿಗೆ ತತಕ್ಷಣ ಅಗತ್ಯ ರಸಗೊಬ್ಬರ ಒದಗಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಶಾಸಕರಾದ ಬಿ.ಸುರೇಶ್ ಗೌಡ, ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಎಂ.ಚಿದಾನಂದಗೌಡ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್, ಮಸಾಲಾ ಜಯರಾಂ, ಬಿಜೆಪಿ ಮುಖಂಡ, ಮಾಜಿ ಜಿಲ್ಲಾಧ್ಯಕ್ಷ ಬಿ.ಸಿ ಹನುಮಂತೇಗೌಡ,
ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ, ಮುಖಂಡರಾದ ಎಸ್.ಡಿ.ದಿಲೀಪ್ ಕುಮಾರ್, ಅನಿಲ್ ಕುಮಾರ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಕಾರ್ಯಕರ್ತರು ಹಾಗೂ ರೈತಬಂಧುಗಳು ಉಪಸ್ಥಿತರಿದ್ದರು.

