ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸೆಷನ್ಸ್ ಕೋರ್ಟ್ ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿಗೆ ಯಾರೇ ಇದ್ದರೂ ತಲೆ ಬಾಗಬೇಕಾಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಮಸ್ಕಲ್ ಗ್ರಾಮದಲ್ಲಿ ಸುದ್ದಿಗಾರರು ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿರುವ ವಿಚಾರದ ಬಗ್ಗೆ ನಿಖಿಲ್ ಕುಮಾರಸ್ವಾಮಿಯವರನ್ನು ಪ್ರಶ್ನಿಸಿದಾಗ ಮಾತನಾಡಿದ ನಿಖಿಲ್, ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ.
ಪ್ರಜ್ವಲ್ ಮೇಲೆ ಆರೋಪ ಬಂದ ವೇಳೆ ಪಕ್ಷದಿಂದ ಅಮಾನತ್ತು ಮಾಡಲಾಗಿತ್ತು. ಜೆಡಿಎಸ್ ಪಕ್ಷದ ವರಿಷ್ಠರು ಪಕ್ಷದಿಂದ ಪ್ರಜ್ವಲ್ ಅವರನ್ನು ಅಮಾನತ್ತಿನಲ್ಲಿಟ್ಟಿದ್ದರು ಎಂದು ನಿಖಿಲ್ ತಿಳಿಸಿದರು.
ಆಗಿನ್ನು ಅಪರಾಧಿಯೋ , ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ ಎಂದು ನಿಖಿಲ್ ತಿಳಿಸಿದರು.

