ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ನಿರ್ದೆಶನ ನೀಡಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಯಾವುದೇ ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಹಾಗೂ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ಕೆಲವು ದಿನಪತ್ರಿಕೆಗಳಲ್ಲಿ ಇ-ಕೆವೈಸಿ ನೋಂದಣಿ ಮಾಡಿಕೊಳ್ಳದ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾಗಿದೆ.

ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ 2 ರಂದು 25,13,798 ಎಪಿಎಲ್ ಕಾರ್ಡುಗಳಿದ್ದವು. ಇಂದು ನವೆಂಬರ್ 16 ರಂದು 25,62,566 ಕಾರ್ಡುಗಳಿವೆ.

ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ, ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ.

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯ ಸಂಗತಿಯಲ್ಲ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

- Advertisement -  - Advertisement -  - Advertisement - 
Share This Article
error: Content is protected !!
";