ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗಾಗಿ ಜನರಲ್ ಕೆ.ಎಸ್‌ತಿಮ್ಮಯ್ಯ ನಗದು ಪ್ರಶಸ್ತಿ ಹಾಗೂ ಶಿಷ್ಯವೇತನಕ್ಕಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ಪ್ರಾಥಮಿಕ, ಪ್ರೌಢ,ಪಿಯು, ಪದವಿ, ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಶಿವಮೊಗ್ಗ ಉಪನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ನೀಡಲಾಗುವುದು. ನವೆಂಬರ್ 30 ಒಳಗೆ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿ ಸಲ್ಲಿಸವಂತೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925ಗೆ ಕರೆ ಮಾಡಬಹುದು.