ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯು “ಹದಿನಾಲ್ಕು ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆಗಿರುವವರು ರೂ.10-00 ಸಂದಾಯಿಸಿ ಅರ್ಜಿ ಫಾರಂಗಳನ್ನು ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ,
ಕೃಷಿ ವಿಶ್ವ ವಿದ್ಯಾನಿಲಯ, ಜಿಕೆವಿಕೆÀ, ಬೆಂಗಳೂರು–560 065 ರವರಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್ 29 ರೊಳಗೆ ಅಪರಾಹ್ನ 4.00 ಘಂಟೆಯೊಳಗೆ ತಲುಪಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23513370 ಗೆ ಸಂರ್ಪಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.