ಚಿತ್ರದುರ್ಗ ನಗರಸಭೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26
ನೇ ಸಾಲಿಗೆ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿತೆರಿಗೆ ಹಾಗೂ ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ನಗರಸಭೆ ಕಾರ್ಯಾಲಯ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement - 

  ಅರ್ಹ ಮಹಿಳಾ ಸ್ವ-ಸಹಾಯ ಸಂಘವು ಈಗಾಗಲೇ ಡೇ-ನಲ್ಡ್ ಅಭಿಯಾನದಡಿ ನೋಂದಾಯಿಸಿರಬೇಕು ಹಾಗೂ ಪಂಚಸೂತ್ರಗಳನ್ನು ಅನುಸರಿಸುತ್ತಿರಬೇಕು. ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಹಾಗೂ ಎಲೆಕ್ಟ್ರಾನಿಕ್ ಪರಿಕರಗಳ ಬಳಕೆ ಗೊತ್ತಿರಬೇಕು.

- Advertisement - 

ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್‍ಖಾತೆ ಹೊಂದಿರಬೇಕು ಹಾಗೂ ಬ್ಯಾಂಕಿನಲ್ಲಿ ತಮ್ಮ ಖಾತೆಯಲ್ಲಿ ಸಾಲ ಪಡೆದು ನಿಯಮಿತವಾಗಿ ಮರು ಪಾವತಿ ಮಾಡಿರಬೇಕು.
ಆಸಕ್ತ ಮಹಿಳಾ ಸ್ವ-ಸಹಾಯ ಸಂಘಗಳು ನಗರಸಭಾ ಕಾರ್ಯಾಲಯ ಚಿತ್ರದುರ್ಗ ಕಚೇರಿಯಲ್ಲಿ ಡೇ-ನಲ್ಕ್ ಶಾಖೆಗೆ ಸಂಪರ್ಕಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";