ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೇ.16 ರಿಂದ ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು, ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್ 20ರಂದು ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸುವರು. ಜೂನ್ 23ರಂದು ತಾಲ್ಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜೂನ್ 30 ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.