ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಯಿಸಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿ ವೇತನ ಅಭಿಯಾನಕಾರ್ಯಕ್ರಮವನ್ನು

- Advertisement - 

ಚಿತ್ರದುರ್ಗ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನ ಕಾರ್ಯಕ್ರಮದಲ್ಲಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖಾ ಅಂತರ್ ಜಾಲದಲ್ಲಿ   ಲಿಂಕ್ ಬಳಸಿ ಅರ್ಜಿಗಳನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-1 ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 

 

 

Share This Article
error: Content is protected !!
";