ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿ 2 ನೇ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸಲು ಏ. 10 ರವರೆಗೆ ಅವಕಾಶ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಎರಡನೇ ವಾರ್ಷಿಕ ಘಟಿಕೋತ್ಸವವು 2026 ನೇ ಏಪ್ರಿಲ್ 27 ರಂದು ಬೆಳಿಗ್ಗೆ 11:30 ಕ್ಕೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ.

2023-24 ಮತ್ತು 2024-25 ನೇ ಸಾಲಿನಲ್ಲಿ ಪದವಿ ಮತ್ತು ಸ್ನಾತಕೋತರ ಪದವಿ ಪರೀಕ್ಷೆಗಳಲ್ಲಿ ಅರ್ಹರಾದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರಗಳನ್ನು ಘಟಿಕೋತ್ಸವದಲ್ಲಿ ವಿತರಿಸಲಾಗುವುದು.

- Advertisement - 

2023-24 ಮತ್ತು 2024-25 ನೇ ಸಾಲಿನಲ್ಲಿ ಪದವಿ ಮತ್ತು ಸ್ನಾತಕೋತರ ಪದವಿಗಳಲ್ಲಿ ಅರ್ಹರಾದ ವಿದ್ಯಾರ್ಥಿಗಳಿಗೆ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸಲು ಈಗಾಗಲೆ ಅಧಿಸೂಚನೆ ಹೊರಡಿಸಲಾಗಿದ್ದು, ಇನ್ನು ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳು ಏಪ್ರಿಲ್ 10 ರೊಳಗೆ ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸುವಂತೆ ಕುಲಸಚಿವರಾದ ಮಮತಾದೇವಿ ಜಿ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";