ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ.
ಅರ್ಹ ಅಭ್ಯರ್ಥಿಗಳು ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಶೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ ಹಾಗೂ
ಬ್ಯಾಂಕ್ ಪಾಸ್ಬುಕ್ (ಕಟ್ಟಾಯವಾಗಿ ಆಧಾರ್ ಲಿಂಕ್ ಮಾಡಿಸಿರಬೇಕು) ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಜಾಲತಾಣ https://sevsindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-235134 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.