ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಿಷನ್ ವಾತ್ಸಲ್ಯ ಯೋಜನೆಯಡಿ ಚಿತ್ರದುರ್ಗ ಸರ್ಕಾರಿ ಮಕ್ಕಳ ಪಾಲನ ಸಂಸ್ಥೆಗಳಾದ ಬಾಲಕರ ಬಾಲಮಂದಿರ, ಬಾಲಕಿಯರ ಬಾಲಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯ ಸಂಸ್ಥೆಗಳಲ್ಲಿ ಮಾಸಿಕ ಗೌರವಧನವನ್ನಾಧರಿಸಿ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಅರೆಕಾಲಿಕ ಶಿಕ್ಷಕರುಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 16 ಅರ್ಜಿ ಸಲ್ಲಿಸಲು ಕೊನೆಯ ದಿನ.

ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು, ಎಜುಕೇಟರ್, ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು, ಎಜುಕೇಟರ್, ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ಶಿಕ್ಷಕರು ಹುದ್ದೆಗಳು ಖಾಲಿ ಇವೆ. ಸರ್ಕಾರಿ ವೀಕ್ಷಣಾಲಯದಲ್ಲಿ ಯೋಗಶಿಕ್ಷಕರು/ದೈಹಿಕ ಶಿಕ್ಷಕರು ಹುದ್ದೆ ಖಾಲಿ ಇದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಾಲಭವನ ಆವರಣ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-295822ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.

 

 

Share This Article
error: Content is protected !!
";