ಚಂದ್ರವಳ್ಳಿ ನ್ಯೂಸ್, ನೆಲಮಂಗಲ, ಬೆಂ.ಗ್ರಾ.ಜಿಲ್ಲೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನೆಲಮಂಗಲ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ, 10 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 63 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಹೆಣ್ಣುಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು (ದೈಹಿಕ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದೆ) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 23 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಅಥವಾ ದೂರವಾಣಿ ಸಂಖ್ಯೆ 080-27722177 ಕ್ಕೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.