ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೋಷಣ್ ಅಭಿಯಾನ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಮಟ್ಟದ ಉಪ ನಿರ್ದೇಶಕರ ಕಛೇರಿಯಲ್ಲಿ ಜಿಲ್ಲಾ ಕಾರ್ಯಕ್ರಮ ಸಹಾಯಕರ –01 ಹುದ್ದೆ ಖಾಲಿ ಇದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್.ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ-560029
ಈ ವಿಳಾಸದಲ್ಲಿ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಕಛೇರಿ ಸಮಯದಲ್ಲಿ ಜೂನ್ 16 ರಂದು ಸಂಜೆ 5.30 ರ ಒಳಗಾಗಿ ಸಲ್ಲಿಸಬೇಕು. ನಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.