ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025
ನೇ ಸಾಲಿನ ಎಸ್‍ಎಸ್‍ಎಲ್‍ಸಿ  ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ31  ಅರ್ಜಿ ಸಲ್ಲಿಸಲು ಕೊನೆಯ ದಿನ.

- Advertisement - 

https://ksgeanews.blogspot.com ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಆನ್‍ಲೈನ್ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅಗತ್ಯ ಮಾಹಿತಿಗಾಗಿ KSGEA NEWS ಯೂಟ್ಯೂಬ್ ಚಾನಲ್‍ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

- Advertisement - 

ವಿದ್ಯಾರ್ಥಿಯು 2025ರ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾನಿಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಗಳಲ್ಲಿ ನೇಮಕವಾಗಿರುವ  ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

ಆನ್‍ಲೈನ್ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಯ ಪಾಸ್‍ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ, ಇಲಾಖೆಯ ಸೇವಾ ಧೃಢೀಕರಣ ಪತ್ರ, ಸಂಘದ ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ ಸೇರಿದಂತೆ ಎಲ್ಲ ದಾಖಲೆಗಳನ್ನು ಜೆಪಿಜಿ ಪಾರ್ಮೆಟ್‍ನಲ್ಲಿ 1 ಎಂಬಿಗೆ ಮೀರದಂತೆ ಅಪ್‍ಲೋಡ್ ಮಾಡಬೇಕು.

- Advertisement - 

ಅರ್ಜಿ  ಸಲ್ಲಿಕೆ ಯಶಸ್ವಿಗೊಂಡ ನಂತರ ನೋಂದಾಯಿತ ಇಮೇಲ್‍ಗೆ ಸ್ವೀಕೃತಿ ರವಾನೆಯಾಗಲಿದೆ. ಶೇಕಡಾವಾರು ಅಂಕಗಳನ್ನು ನಿರ್ಧರಿಸಿ, ಅರ್ಜಿಯನು ಪರಿಗಣಿಸುವ ನಿರ್ಧಾರ ಸಂಘದ್ದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-22354784/83 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ  ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್  ಮುದ್ದಜ್ಜಿ ತಿಳಿಸಿದ್ದಾರೆ.

 

Share This Article
error: Content is protected !!
";