ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕೃಷಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಗೆ ವಿವಿಧ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೃಷಿ ಯಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ಸಾಮಾನ್ಯ ವರ್ಗದವರಿಗೆ ಶೇ.50 ರಷ್ಟು ಹಾಗೂ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳಿಗೆ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ.
ಆಸಕ್ತ ರೈತರು ಹತ್ತಿರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಯೋಜನೆಗಳಿಗೆ ಹೆಸರು ನೋಂದಾಯಿಸಿಕೊಳ್ಳಬಹುದು. ರೈತರಿಂದ ಹೆಚ್ಚಿನ ಅರ್ಜಿಗಳು ಸ್ವೀಕೃತಿಯಾದಲ್ಲಿ ನಿಯಾಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಬಳ್ಳಾರಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.