ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಬೆಂಗಳೂರಿನ ಹೆಚ್.ಎ.ಎಲ್.ನಲ್ಲಿ ಫಿಟ್ಟರ್
, ಟರ್ನರ್, ಮ್ಯಾಕ್ಯಾನಿಕ್, ಎಲೆಕ್ಟ್ರಾನಿಕ್, ವೆಲ್ಡರ್, ಸೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮೇಕರ್ ಅಂಡ್ ಸಿಎನ್‌ಸಿ ಪ್ರೋಗ್ರಾಮರ್ ಕಂ ಆಪರೇಟರ್ ಟ್ರೇಡ್‌ನಲ್ಲಿ ಐ.ಟಿ.ಐ. ಪಾಸಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ಅಕ್ಟೋಬರ್ ೭ರೊಳಗೆ www.apprenticeship.gov.in ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ನಂತರ ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ್  ಕಾರ್ಡ್, ಭಾವಚಿತ್ರ, ಎಸ್.ಎಸ್.ಎಲ್.ಸಿ ಮತ್ತು ಐ.ಟಿ.ಐ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ(ಪ.ಜಾತಿ/ಪ.ಪಂಗಡ/ಹಿಂದುಳಿದ ವರ್ಗ/ವಿಕಲಚೇತನ ಅಭ್ಯರ್ಥಿಗಳಾಗಿದ್ದಲ್ಲಿ ಮಾತ್ರ) ಸೇರಿದಂತೆ ಮತ್ತಿತರ ದಾಖಲೆಗಳನ್ನು ಲಗತ್ತಿಸಿ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ: ೦೮೧೬-೨೨೭೮೪೮೮ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";