ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ
, ರಾಷ್ಟ್ರ ಮತ್ತು ಅಂತರ್‍ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕøತ ಮಗುವಾಗಿರಬೇಕು.

- Advertisement - 

ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಗೊಂಡ ಮನವಿಯೊಂದಿಗೆ ಅರ್ಜಿಯನ್ನು ಇದೇ ಫೆ.20ರೊಳಗಾಗಿ ಕಚೇರಿಯ ವೇಳೆಯಲ್ಲಿ ಅಕಾಡೆಮಿಯ ಕೇಂದ್ರ ಕಚೇರಿಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.

ಆಯಾ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ  ಹಾಗೂ ಅಕಾಡೆಮಿಯ ಕೇಂದ್ರ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆಯುವುದು. ಭರ್ತಿ ಮಾಡಿದ ಅರ್ಜಿಗಳನ್ನು ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ ಔಟ್ ಹಿಂಭಾಗ, ಕೆಎಚ್‍ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 8050392209, 7204396275, 9448981944 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";