ಸರ್ಕಾರಿ ಕೋಟದಡಿಯಲ್ಲಿ ಡಿ.ಫಾರ್ಮ ಕೋರ್ಸ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿ, ಬೆಂಗಳೂರು ವತಿಯಿಂದ 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ,

ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೈಬ್ಸೈಟ್ www.beadpharmacy.org ಮೂಲಕ ಸಲ್ಲಿಸಬೇಕು. ನೇರ ಅಥವಾ ಅಂಚೆ ಮೂಲಕ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ, ಅರ್ಜಿ ಸಲ್ಲಿಸಲು ದ್ವಿತೀಯ ಪಿ.ಯು.ಸಿ. (ಪಿಸಿಎಂ/ಪಿಸಿಬಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಅಕ್ಟೋಬರ್ 14 ರಿಂದ 30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೀಟು ಹಂಚಿಕೆಯ ಪ್ರಕ್ರಿಯೆಯ ದಿನಾಂಕ ಮತ್ತು ಸಮಯವನ್ನು ವೈಬ್ಸೈಟ್ www.beadpharmacy.org  ನಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22270666 ಹಾಗೂ ಮೇಲ್ [email protected][email protected] ಗೆ ಸಂಪರ್ಕಿಸಬಹುದಾಗಿದೆ ಎಂದು ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";