ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು ಅರಿವು-ಶೈಕ್ಷಣಿಕ ಸಾಲ ಯೋಜನೆಯಡಿ ಶೈಕ್ಷಣಿಕ ಸಾಲ ಸೌಲಭ್ಯ ಕಲ್ಪಿಸಲು ಆರ್ಯವೈಶ್ಯ ಸಮುದಾಯದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

        ಈ ಯೋಜನೆಯಡಿ ಸಿ.ಇ.ಟಿ/ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿಹೆಚ್.ಡಿ. ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.೨ರ ಬಡ್ಡಿದರದಲ್ಲಿ ೧ ಲಕ್ಷ ರೂ.ಗಳ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ ೪ ತಿಂಗಳ ವಿರಾಮಾವಧಿಯ ನಂತರ ೩೬ ಮಾಸಿಕ ಕಂತುಗಳಲ್ಲಿ ಸಾಲವನ್ನು ಮರುಪಾವತಿಸಬೇಕು.

ಅರ್ಜಿದಾರರು ೧೮ ರಿಂದ ೩೫ ವರ್ಷದೊಳಗಿನವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ೬,೦೦,೦೦೦ ರೂ.ಗಳ ಮಿತಿಯೊಳಗಿರಬೇಕು ಹಾಗೂ  ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಜಿಯಲ್ಲಿ ಪಡೆದು(ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು)ಸಲ್ಲಿಸಬೇಕು. 

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಸಾಲ ಸೌಲಭ್ಯಕ್ಕೆ ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.೩೩, ವಿಕಲಚೇತನರಿಗೆ ಶೇ.೫ ಹಾಗೂ ತೃತೀಯ ಲಿಂಗಿಗಳಿಗೆ ಶೇ.೫ರಷ್ಟು ಮೀಸಲಾತಿ ನೀಡಲಾಗುವುದು. ಒಂದು ಕುಟುಂಬದಲ್ಲಿ ಇಬ್ಬರು ಫಲಾನುಭವಿಗಳು ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಡಿಸೆಂಬರ್ ೧೫ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಶಾರದಾದೇವಿನಗರ, ಜೆ.ಪಿ.ಸ್ಕೂಲ್ ಪಕ್ಕ, ಹನುಮಂತಪುರ ಮುಖ್ಯ ರಸ್ತೆ, ತುಮಕೂರು, ದೂರವಾಣಿ ಸಂಖ್ಯೆ ೦೮೧೬-೨೦೦೫೦೦೮ ಅಥವಾ ನಿಗಮದ ಸಹಾಯವಾಣಿ ೯೪೪೮೪೫೧೧೧೧ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement -  - Advertisement - 
Share This Article
error: Content is protected !!
";