ಚಂದ್ರವಳ್ಳಿ ನ್ಯೂಸ್, ತುಮಕೂರು:
ಹಿರೇಹಳ್ಳಿ ಎಸ್.ಬಿ.ಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಗೆ ೩೦ ದಿನಗಳ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ ಎಂದು ತರಬೇತಿ ಸಂಸ್ಥೆಯ ನಿರ್ದೇಶಕ ವಾದಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಓದಲು ಬರೆಯಲು ಬರುವ ೧೮ ರಿಂದ ೪೫ ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿಗಾಗಿ ನವೆಂಬರ್ ೧೧ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯನ್ನು ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ತರಬೇತಿ ಸಂಸ್ಥೆಯಲ್ಲಿ ನೀಡಲಾಗುವುದು.
ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ೦೮೧೬-೨೨೪೩೩೮೬, ೯೭೩೮೩೫೧೦೪೮, ೯೬೬೩೬೮೦೦೦೧ನ್ನು ಅರ್ಜಿ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.