8ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಡೆಹ್ರಾಡೂನ್‍ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ (ಆರ್‍ಐಎಂಸಿ) ಜನವರಿ 2027ನೇ ಅಧಿವೇಶನಕ್ಕಾಗಿ 8ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗುವ ಅರ್ಹತಾ ಪರೀಕ್ಷೆಗೆ ಜಿಲ್ಲೆಯ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 11 ಳಿ ವರ್ಷದಿಂದ 13 ವರ್ಷ ವಯೋಮಿತಿಯೊಳಗಿರಬೇಕು. ಅಂದರೆ 02-01-2014 ರಿಂದ 01-07-2015 ರ ನಡುವೆ ಜನಿಸಿರಬೇಕು.

- Advertisement - 

ಪ್ರವೇಶ ಪರೀಕ್ಷೆಯು 2026ರ ಜೂನ್ 7ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 15, 2026 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು 560025 ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459 ಅಥವಾ ಇಲಾಖೆಯ ಅಧಿಕೃತ ಜಾಲತಾಣ  www.rimc.gov.in ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";