ಚಂದ್ರವಳ್ಳಿ ನ್ಯೂಸ್, ತುಮಕೂರು:
ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಮಹಾನಗರಪಾಲಿಕೆ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಅಕ್ಕ ಕೆಫೆ” ಕ್ಯಾಂಟೀನ್ ನಡೆಸಲು ಆಸಕ್ತಿಯುಳ್ಳವರು ನವೆಂಬರ್ ೨೭ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಡೇ-ನಲ್ಮ್ ಯೋಜನೆಯಡಿ ನೋಂದಾಯಿತವಾಗಿರುವ ಮಹಿಳಾ ಸ್ವ-ಸಹಾಯ ಸಂಘ/ಪ್ರದೇಶ ಮಟ್ಟದ ಒಕ್ಕೂಟದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಅರ್ಜಿದಾರರು ಸ್ವ-ಸಹಾಯ ಸಂಘದ ಸದಸ್ಯರ ಬಿಪಿಎಲ್ ಕಾರ್ಡ್, ಸ್ವ-ಸಹಾಯ ಸಂಘವು ಅಕ್ಕ ಕೆಫೆಯನ್ನು ನಿರ್ವಹಿಸಲು ಆಸಕ್ತಿ, ಇಚ್ಛೆ, ಬದ್ಧತೆ, ಕ್ಯಾಂಟೀನ್ ಪ್ರಾರಂಭಿಸಲು ಬಂಡವಾಳವನ್ನು ಹೂಡಲು ಆಸಕ್ತಿ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.