ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಧ್ಯ ಕರ್ನಾಟಕದ ಪ್ರಮುಖ ಜಿಲ್ಲೆಯಾದ ಚಿತ್ರದುರ್ಗ ನಗರದ ಮಹಾತ್ಮಫುಲೆ ಅಧ್ಯಯನ ಕೇಂದ್ರದಲ್ಲಿ ಸ್ಥಳೀಯ ಉದ್ಯೋಗಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಕಿಂಗ್ ಹಾಗೂ ಇನ್ನಿತರ ಪರೀಕ್ಷೆಗಳಿಗೆ ಉಚಿತ ತರಬೇತಿ ಶೀಘ್ರ ಪ್ರಾರಂಬಿಸುತಿದ್ದು ಈ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಮಹಾತ್ಮ ಪುಲೆ ಅದ್ಯಯನ ಕೇಂದ್ರದ ರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದರ ಜೊತೆಗೆ ಈಗಾಗಲೇ ನಮ್ಮ ಕೇಂದ್ರದ ವತಿಯಿಂದ KPSC/KEA ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಮತ್ತು ರಿಯಾಯಿತಿಯಲ್ಲಿ ರಾಜ್ಯದ ವಿವಿದ ಭಾಗದ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತಿದೆ.
ಇದೇ ಮೊದಲ ಬಾರಿಗೆ ಚಿತ್ರದುರ್ಗದಲ್ಲಿ ಬ್ಯಾಂಕಿಂಗ್ IBPS ಹಾಗೂ RRB, SSC ಮುಂತಾದ ಕೇಂದ್ರದ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಗಳಿಗೆ ಅತೀ ಶೀಘ್ರದಲ್ಲಿ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ.ಆಸಕ್ತಿಯುಳ್ಳ ಅಭ್ಯರ್ಥಿಗಳು ಖುದ್ದಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ನೋಂದಣಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಳಾಸ : ಮಹಾತ್ಮಾಪುಲೆ ಅಧ್ಯಯನ ಕೇಂದ್ರ, #13,ಮೊದಲನೇ ಮುಖ್ಯ ರಸ್ತೆ, ಸರಸ್ವತಿಪುರಂ,ಚಿತ್ರದುರ್ಗ-577501, ಸಂಪರ್ಕಿಸಿ:9242843504, 9740108588, 9972445430.

