ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ / ಸ್ನಾತಕೋತ್ತರ ಪದವಿ ಕೋರ್ಸುಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ನಾತಕ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್. ಡಬ್ಲ್ಯೂ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಾತಿಗೆ ನವೆಂಬರ್ ೧೫ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂರವಾಣಿ ಸಂಖ್ಯೆ: ೦೮೧೬-೨೯೫೫೫೮೦, ೯೮೪೪೫೦೬೬೨೯, ೯೮೮೬೧೧೨೪೩೪, ೭೩೪೯೪೭೪೩೩೯ನ್ನು ಸಂಪರ್ಕಿಸಬೇಕೆಂದು ಪ್ರಾದೇಶಿಕ ನಿರ್ದೇಶಕ ಡಾ: ಆರ್. ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.