ಚಂದ್ರವಳ್ಳಿ ನ್ಯೂಸ್, ತುಮಕೂರು:
ಕೃಷಿ ಇಲಾಖೆ ವತಿಯಿಂದ ಜಿಲ್ಲೆಯಲ್ಲಿರುವ ವೈಯಕ್ತಿಕ ಫಲಾನುಭವಿಗಳಿಗೆ ಹಾರ್ವೆಸ್ಟರ್ ಹಬ್ ಸ್ಥಾಪನೆ ಮಾಡಲು ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹಬ್ ಸ್ಥಾಪನೆಗಾಗಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.೫೦(ಗರಿ? ೪೦ ಲಕ್ಷ ರೂ.)ರಷ್ಟು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ಶೇ.೭೦(ಗರಿಷ್ಟ ೫೦ಲಕ್ಷ ರೂ.)ರಷ್ಟು ಸಹಾಯಧನವನ್ನು “Credit linked backended subsidy” ಮೂಲಕ ನೀಡಲಾಗುವುದು.
ಅರ್ಜಿದಾರರು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳಾದ Fruits ID., ಪಹಣಿ, ಜಾತಿ ಪ್ರಮಾಣ ಪತ್ರ, ಗುರುತಿನ ಪತ್ರ, ಬ್ಯಾಂಕ್ ಖಾತೆ ಸಂಖ್ಯೆ, ೧೦೦ ರೂ.ಗಳ ಛಾಪಾ ಕಾಗದದ ಮೇಲೆ ಹಬ್ ಅನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪ್ರತಿ ಮತ್ತಿತರ ದಾಖಲೆಗಳನ್ನು ಲಗತ್ತಿಸಿ ಅಕ್ಟೋಬರ್ ೫ರೊಳಗಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ತಿಳಿಸಿದ್ದಾರೆ.