ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25
ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರಿನ ಕೆ.ಆರ್. ಸರ್ಕಲ್‍ನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು ಸಿವಿಲ್, ಆರ್ಕಿಟೆಕ್ಟರ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್ ಮತ್ತು ಇನ್ಫರ್ಮೇಶನ್ ಸೈನ್ಸ್ ಹಾಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಭೌತಶಾಸ್ತ್ರ, ರಾಸಾಯನ ಶಾಸ್ತ್ರ, ಗಣಿತ ಶಾಸ್ತ್ರ, ಇಂಗ್ಲೀಷ್ ಮತ್ತು ಕನ್ನಡ ಇತರೆ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿಹೆಚ್.ಡಿ. ಪದವಿ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಾಲತಾಣ www.uvce.karnataka.gov.in ನಿಂದ ನಿಗಧಿತ ನಮೂನೆಗಳನ್ನು ಡೌನ್‍ಲೋಡ್ ಮಾಡಿಕೊಂಡು ಅರ್ಜಿಯನ್ನು ಸಂಬಂಧಿಸಿದ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರ ಕಚೇರಿ, ಯು.ವಿ.ಸಿ.ಇ, ಕೆ.ಆರ್. ವೃತ್ತ ಇಲ್ಲಿಗೆ ಸೆಪ್ಟೆಂಬರ್ 05ರೊಳಗಾಗಿ ಅಥವಾ ಅದಕ್ಕೂ ಮುಂಚಿತವಾಗಿ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಆಯಾಯಾ ವಿಭಾಗದ ಮುಖ್ಯಸ್ಥರುಗಳನ್ನು ಸಂಪರ್ಕಿಸಬಹುದು. ಸಂದರ್ಶನ ದಿನಾಂಕವನ್ನು ವೆಬ್‍ಸೈಟ್‍ನಲ್ಲಿ ತಿಳಿಸಲಾಗುವುದು ಮತ್ತು ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುತ್ತದೆ ಎಂದು ಬೆಂಗಳೂರು ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

- Advertisement -  - Advertisement -  - Advertisement - 
Share This Article
error: Content is protected !!
";