ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಕೆ.ಆರ್ ವೃತ್ತ, ಬೆಂಗಳೂರು ಇಲ್ಲಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.uvce.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಿಗೆ ಡಿಸೆಂಬರ್ 24 ರಂದು ಅಥವಾ ಅದಕ್ಕೂ ಮುಂಚಿತವಾಗಿ ಸಲ್ಲಿಸುವುದು.
ನಿಗಧಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಆ ವಿಭಾಗದ ಮುಖ್ಯಸ್ಥರನ್ನು ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.