ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2024 – 25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಗಣಿತ, ಜೀವಶಾಸ್ತ್ರ ಮತ್ತು ಭಾರತದ ಸಂವಿಧಾನ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಎಐಸಿಟಿಇ / ಯುಜಿಸಿ ನಿಯಮಗಳಿಗನುಸಾರ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ www.uvce.karnataka.gov.in ನಿಂದ ನಿಗದಿತ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರ ಕಛೇರಿ, ಯುವಿಸಿಇ, ಕೆ.ಆರ್ ವೃತ್ತ ಇಲ್ಲಿಗೆ ಜನವರಿ 13 ರೊಳಗೆ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಸಮನ್ವಯಧಿಕಾರಿ, ತಾಂತ್ರಿಕೇತರ ವಿಷಯ, ಇವರನ್ನು ಸಂಪರ್ಕಿಸಬಹುದು. ಸಂದರ್ಶನದ ದಿನಾಂಕವನ್ನು ವೆಬ್ಸೈಟ್ನಲ್ಲಿ ತಿಳಿಸಲಾಗುತ್ತದೆ ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.