ನರ್ಸಿಂಗ್ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿಗೆ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಮತ್ತು ಪಾರ್ಸಿ ಸಮುದಾಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ https://sevasindhu.karnataka.gov.in/sevasindhu/departmentservices 
ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕೋರ್ಸುನ ಅವಧಿಪೂರ್ಣಾವಧಿ. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಒಟ್ಟು ಆದಾಯ 2.50ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";