ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಆಫೀಸ್ ತಂತ್ರಾಂಶ ಹಾಗೂ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮಾಹಿತಿ ತಂತ್ರಜ್ಞರ / ಸಲಹೆಗಾರರ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  

ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 60,000/- ರೂಪಾಯಿ ವೇತನ ನೀಡಲಾಗುವುದು. ಹುದ್ದೆಯು 6 ತಿಂಗಳ ಅವಧಿಯಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ ವಯೋಮಿತಿ 35 ವರ್ಷಗಳು ಮೀರಿರಬಾರದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪದವಿ/ ಕಂಪ್ಯೂಟರ್ ವಿಜ್ಞಾನ / ಐಟಿ ಅಥವಾ ಕಂಪ್ಯೂಟರ್ ಶಿಕ್ಷಣವನ್ನು ಪಡೆದಿರಬೇಕು.

ಪ್ರತಿಷ್ಠಿತ ಸಂಸ್ಥೆ/ಕಂಪನಿಯಲ್ಲಿ ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";