ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಣೆ : ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಸಂಬAಧ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲೆಯಲ್ಲಿನ 20ಕ್ಕೂ ಹೆಚ್ಚು ಕುರಿ, ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುರಿಗಾಹಿಗಳು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು, ವಲಸೆ ಕುರಿಗಾರರು ಎಂಬುದಕ್ಕೆ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳಿಂದ ಮಹಜರ್ ಪ್ರಮಾಣ ಪತ್ರ ಲಗತ್ತಿಸಿ ಸೂಕ್ತ ದಾಖಲೆಗಳೊಂದಿಗೆ ಸೆ.30 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳಿಗೆ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಪಶು ಚಿಕಿತ್ಸಾಲಯ, ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ.ಸಿ.ತಿಪ್ಪೇಸ್ವಾಮಿ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

- Advertisement -  - Advertisement - 
Share This Article
error: Content is protected !!
";