ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವ ಜನತೆಗೆ ಸ್ವ ಉದ್ಯೋಗ ಮಾಡಲು ಮಹಿಳೆಯರ ಟೈಲರಿಂಗ್ ತರಬೇತಿ ನೀಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯ ಅವಧಿ 31 ದಿನಗಳಾಗಿದ್ದು, ತರಬೇತಿಯು ಇದೇ ಫೆ.10 ರಿಂದ ಪ್ರಾರಂಭವಾಗದ್ದು, ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ. 19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.
ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಫೆ.10ರಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.

